ಸಂತ ತೆರೇಸಾ ಶಾಲೆ – ಕನ್ನಡ ರಾಜ್ಯೋತ್ಸವದ ಸಂಭ್ರಮ
ಬೆಂದೂರಿನ ಸಂತ ತೆರೇಸಾ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು ಇದರ ಉಪನ್ಯಾಸಕರಾದ ಡಾ. ಸುಮಂಗಲ ಎಸ್. ನಾಯಕ್ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾವೆಲ್ಲರೂ ಕನ್ನಡವನ್ನು ಉಳಿಸಿ ಬೆಳೆಸಬೇಕಾದ ಕೆಲಸವನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲೆಯಲ್ಲಿ 'ಕನ್ನಡ ಸಾಹಿತ್ಯ ದಿನ'ವನ್ನು ಆಚರಿಸಿ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಭ |ಲೂರ್ಡ್ಸ್. ಉಪಪ್ರಾಂಶುಪಾಲರಾದ ಭ | ಕ್ಯಾರೆನ್, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.